2 Kings 16:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಹಾಜನು ಸಬ್ಬತ್ ದಿನಕ್ಕಾಗಿ ಕಟ್ಟಿದ ಮಂಟಪವನ್ನು ಬದಲಾಯಿಸಿದನು. ಕೆಲಸಗಾರರು ಆಲಯದ ಒಳಗೆ ಇದನ್ನು ನಿರ್ಮಿಸಿದ್ದರು. ಅಹಾಜನು ರಾಜನಿಗಾಗಿ ಇದ್ದ ಹೊರಭಾಗದ ಬಾಗಿಲನ್ನು ಬದಲಾಯಿಸಿದನು. ಅಹಾಜನು ದೇವಾಲಯದಿಂದ ಇವುಗಳನ್ನೆಲ್ಲಾ ಅಶ್ಶೂರದ ರಾಜನ ದೆಸೆಯಿಂದ ಬದಲಾಯಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಈ ಆಹಾಜನೇ.
Kannada BSI Bible 2016
ಇದಲ್ಲದೆ ಮನೆಯಲ್ಲಿ ಅವರು ಕಟ್ಟಿಸಿದ ಸಬ್ಬತ್ತಿಗೋಸ್ಕರ ಇದ್ದ ಒಪ್ಪಾರನ್ನೂ ಹೊರಗಿದ್ದ ಅರಸನ ಪ್ರವೇಶವನ್ನೂ ಅಶ್ಶೂರಿನ ಅರಸನ ನಿಮಿತ್ತವಾಗಿ ಕರ್ತನ ಮನೆಯಿಂದ ತಿರುಗಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್‍ದಿನದ ಆರಾಧನೆಗಾಗಿ ರಾಜರಿಗೆ ಕಟ್ಟಲ್ಪಟ್ಟಿದ್ದ ಮಂಟಪವನ್ನೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಲನ್ನೂ ಬದಲಾಯಿಸಿದನು.
Kannada Bible (KNCL) BSI 2016
ಸರ್ವೇಶ್ವರನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಈ ಆಹಾಜನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಆಲಯದ ಪ್ರಾಕಾರದ ಒಳಗೆ ಸಬ್ಬತ್ ದಿನದ ಆರಾಧನೆಗಾಗಿ, ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದನು, ಇವುಗಳನ್ನೆಲ್ಲ ಅಸ್ಸೀರಿಯದ ಅರಸನ ನಿಮಿತ್ತವಾಗಿ ಆಹಾಜನೇ ಬದಲಾಯಿಸಿದನು.