2 Kings 16:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಹಾಜನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
Kannada BSI Bible 2016
ಆದರೆ ಆಹಾಜನು ಮಾಡಿದ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾಜನ ಉಳಿದ ಚರಿತ್ರೆಯೂ ಅವನ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
Kannada Bible (KNCL) BSI 2016
ಆಹಾಜನ ಉಳಿದ ಚರಿತ್ರೆ ಹಾಗು ಕೃತ್ಯಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಹಾಜನ ಆಳ್ವಿಕೆಯಲ್ಲಿಯ ಇತರ ಕ್ರಿಯೆಗಳು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.