2 Kings 16:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹಾಜನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ ದಾವೀದನಗರದಲ್ಲಿ ಸಮಾಧಿಮಾಡಿದರು. ಅಹಾಜನ ಮಗನಾದ ಹಿಜ್ಕೀಯನು ಅವನ ನಂತರ ಹೊಸ ರಾಜನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾಜನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.
Kannada BSI Bible 2016
ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು. ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು. ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಶ್ಮಶಾನದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಹಿಜ್ಕೀಯ ಎಂಬವನು ಅರಸನಾದನು.
Kannada Bible (KNCL) BSI 2016
ಅವನು ಸತ್ತು ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಹಿಜ್ಕೀಯನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.