2 Kings 16:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಾಮ್ಯರ ರಾಜನಾದ ರೆಚೀನನು ಮತ್ತು ರೆಮಲ್ಯನ ಮಗನೂ ಇಸ್ರೇಲಿನ ರಾಜನೂ ಆದ ಪೆಕಹನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಬಂದರು. ರೆಚೀನ ಮತ್ತು ಪೆಕಹ ಅಹಾಜನಿಗೆ ಮುತ್ತಿಗೆ ಹಾಕಿದರು. ಆದರೆ ಅವನನ್ನು ಸೋಲಿಸಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ ಎಂಬುವವರು ಒಟ್ಟಿಗೆ ಸೇರಿ ಯೆರೂಸಲೇಮಿಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.
Kannada BSI Bible 2016
ಅವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀ ನನೂ ಇಸ್ರಾಯೇಲಿನ ಅರಸನಾದಂಥ ರೆಮಲ್ಯನ ಮಗನಾದ ಪೆಕಹನೂ ಯುದ್ಧಮಾಡಲು ಯೆರೂಸ ಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು; ಆದರೆ ಅವನನ್ನು ಜಯಿಸಲಾರದೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲ್ಯರ ಅರಸನೂ ರೆಮಲ್ಯನ ಮಗನೂ ಆದ ಪೆಕಹ ಎಂಬವರು ಕೂಡಿಕೊಂಡು ಯೆರೂಸಲೇವಿುಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವದು ಅವರಿಂದ ಆಗಲಿಲ್ಲ.
Kannada Bible (KNCL) BSI 2016
ಇವನ ಕಾಲದಲ್ಲಿ ಸಿರಿಯಾದವರ ಅರಸನಾದ ರೆಚೀನ್ ಮತ್ತು ಇಸ್ರಯೇಲರ ಅರಸನೂ ರೆಮಲ್ಯನ ಮಗನೂ ಆದ ಪೆಕಹ ಎಂಬವರು ಕೂಡಿಕೊಂಡು ಜೆರುಸಲೇಮಿಗೆ ವಿರುದ್ಧ ದಾಳಿಮಾಡಿ ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸಲು ಅವರಿಂದ ಆಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಾಮಿನ ಅರಸನಾದ ರೆಚೀನ್, ಮತ್ತು ಇಸ್ರಾಯೇಲರ ಅರಸನೂ ರೆಮಲ್ಯನ ಮಗನೂ ಆದ ಪೆಕಹನು ಯುದ್ಧಮಾಡಲು ಯೆರೂಸಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.