2 Kings 16:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯಲ್ಲಿ ಅರಾಮ್ಯರ ರಾಜನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ಯಕ್ಕೆ ಸೇರಿಸಿಕೊಂಡನು. ರೆಚೀನನು ಏಲತ್ ಪಟ್ಟಣದಲ್ಲಿ ವಾಸಿಸುತ್ತಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಅರಾಮ್ಯರು ಬಂದು ಏಲತ್ ಪಟ್ಟಣದಲ್ಲಿ ನೆಲೆಸಿದರು; ಅವರು ಇಂದಿನವರೆಗೂ ಅಲ್ಲಿಯೇ ವಾಸಿಸುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು.ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.
Kannada BSI Bible 2016
ಅದೇ ವೇಳೆಯಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲ ತನ್ನು ಅರಾಮಿಗೆ ತಿರಿಗಿ ಸೇರಿಸಿಕೊಂಡು ಏಲತಿನಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು; ಅರಾಮ್ಯರು ಏಲತಿಗೆ ಬಂದು ಇಂದಿನವರೆಗೂ ಅಲ್ಲಿ ವಾಸ ಮಾಡುತ್ತಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್‍ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸಿದರು. ಇಂದಿನವರೆಗೂ ಅದರಲ್ಲಿ ಅವರೇ ವಾಸವಾಗಿದ್ದಾರೆ.
Kannada Bible (KNCL) BSI 2016
ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಸಿರಿಯಾ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸಿದರು. ಇಂದಿನವರೆಗೂ ಅದರಲ್ಲಿ ಅವರೇ ವಾಸವಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ವೇಳೆಯಲ್ಲಿ ಅರಾಮಿನ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ತಿರುಗಿ ಸೇರಿಸಿಕೊಂಡು ಏಲತ್ ಪಟ್ಟಣದಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು. ಎದೋಮ್ಯರು ಏಲತ್ ಪಟ್ಟಣದಲ್ಲಿ ಬಂದು ಇಂದಿನವರೆಗೂ ಅಲ್ಲಿ ವಾಸವಾಗಿದ್ದಾರೆ.