2 Kings 16:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.
Kannada BSI Bible 2016
ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್‌ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಇವನ ಮಾತಿಗೆ ಒಪ್ಪಿ ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತಕ್ಕೆ ಒಯ್ದನು.
Kannada Bible (KNCL) BSI 2016
ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಸ್ಸೀರಿಯದ ಅರಸನು ಅವನ ಮಾತು ಕೇಳಿ, ದಮಸ್ಕಕ್ಕೆ ಹೋಗಿ, ಅದನ್ನು ಮುತ್ತಿಗೆ ಹಾಕಿ, ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು, ರೆಚೀನನನ್ನು ಕೊಂದುಹಾಕಿದನು.