2 Kings 17:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.
Kannada BSI Bible 2016
ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ತಮ್ಮ ಪಿತೃಗಳಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿ ವಾಕ್ಯಗಳನ್ನೂ ತಿರಸ್ಕರಿಸಿ ವಿುಥ್ಯಾದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು; ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ ಅವರನ್ನು ಅನುಸರಿಸಿದರು;
Kannada Bible (KNCL) BSI 2016
ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಕಟ್ಟಳೆಗಳನ್ನೂ, ದೇವರು ತಮ್ಮ ಪಿತೃಗಳ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಅವರಿಗೆ ಹೇಳಿದ ಎಚ್ಚರಿಕೆಯನ್ನೂ ತಿರಸ್ಕರಿಸಿದರು. ಅವರು ವ್ಯರ್ಥವಾದ ವಿಗ್ರಹಗಳನ್ನು ಹಿಂಬಾಲಿಸಿ, ನಿಷ್ಪ್ರಯೋಜಕರಾದರು. “ನೀವು ಅವರ ಹಾಗೆ ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ್ದರೂ, ಅವರು ತಮ್ಮ ಸುತ್ತಲಿನ ಜನರನ್ನೇ ಅನುಸರಿಸಿದರು.