2 Kings 17:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೆಹೋವನು ಇಸ್ರೇಲಿನ ಬಗ್ಗೆ ಉಗ್ರಕೋಪಿಯಾಗಿ, ಅವರನ್ನು ತನ್ನ ದೃಷ್ಟಿಯಿಂದ ದೂರಮಾಡಿದನು. ಯೆಹೂದಕುಲದವರ ಹೊರತಾಗಿ ಇಸ್ರೇಲರಲ್ಲಿ ಯಾರೂ ಉಳಿಯಲಿಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.
Kannada BSI Bible 2016
ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಈ ಪ್ರಕಾರ ನಡೆದದರಿಂದ ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು ಯೆಹೂದಕುಲದವರ ಹೊರತು ಉಳಿದ ಎಲ್ಲಾ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.
Kannada Bible (KNCL) BSI 2016
ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಬಹುಕೋಪಗೊಂಡು, ಅವರನ್ನು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿಯಲಿಲ್ಲ.