2 Kings 17:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರನ್ನು ಸಮಾರ್ಯದಿಂದ ಅಶ್ಶೂರದ ರಾಜನು ಒಯ್ದನು. ನಂತರ ಅಶ್ಶೂರದ ರಾಜನು ಬಾಬಿಲೋನ್, ಕೂತಾ, ಅವ್ವಾ, ಹಮಾತ್ ಮತ್ತು ಸೆಫರ್ವಯಿಮ್‌ಗಳಿಂದ ಜನರನ್ನು ಕರೆತಂದು ಇಸ್ರೇಲರ ಬದಲಾಗಿ ಅವರನ್ನು ಸಮಾರ್ಯದಲ್ಲಿ ನೆಲೆಗೊಳಿಸಿದನು. ಅವರು ಸಮಾರ್ಯವನ್ನು ಹೊಂದಿಕೊಂಡು ಅವರ ಸುತ್ತಲಿನ ನಗರಗಳಲ್ಲಿ ವಾಸಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.
Kannada BSI Bible 2016
ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲ್ಯರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರ್ಯದೇಶವನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.
Kannada Bible (KNCL) BSI 2016
ಅಸ್ಸೀರಿಯಾದ ಅರಸನು ಸಮಾರಿಯಾ ಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಯೇಲರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರಿಯಾ ನಾಡನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.