2 Kings 17:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅಶ್ಶೂರದ ರಾಜನು, “ನೀವು ಸಮಾರ್ಯದಿಂದ ಕೆಲವು ಯಾಜಕರನ್ನು ಕರೆದೊಯ್ದಿರುವಿರಿ. ನಾನು ಸಮಾರ್ಯದಿಂದ ಸೆರೆಹಿಡಿದು ತಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿ. ಆ ಯಾಜಕನು ಹೋಗಿ ಅಲ್ಲಿಯೇ ನೆಲೆಸಲಿ. ನಂತರ ಆ ಯಾಜಕನ ಆ ದೇಶದ ದೇವರ ಕಟ್ಟಳೆಗಳನ್ನು ಜನರಿಗೆ ಬೋಧಿಸಲಿ” ಎಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಶ್ಶೂರದ ಅರಸನು ಅವರಿಗೆ, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ” ಎಂದು ಆಜ್ಞಾಪಿಸಿದನು.
Kannada BSI Bible 2016
ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ಅವರಿಗೆ - ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅವರಿಗೆ ಕಲಿಸಲಿ ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಆಗ ಅವನು, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ನಾಡಿನ ದೇವರಿಗೆ ಸೇವೆಮಾಡುವ ರೀತಿಯನ್ನು ಅವರಿಗೆ ಕಲಿಸಲಿ,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಸ್ಸೀರಿಯದ ಅರಸನು, “ನೀವು ಅಲ್ಲಿಂದ ತೆಗೆದುಕೊಂಡು ಬಂದ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ. ಅವನು ಅಲ್ಲಿ ವಾಸವಾಗಿರಲಿ. ಅವನೇ ಅವರಿಗೆ ಆ ದೇಶದ ದೇವರು ಅಪೇಕ್ಷಿಸುವುದನ್ನು ಬೋಧಿಸಲಿ,” ಎಂದು ಆಜ್ಞಾಪಿಸಿದನು.