2 Kings 17:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಅಶ್ಶೂರದವರು ಸಮಾರ್ಯದಿಂದ ಕರೆದೊಯ್ದಿದ್ದ ಯಾಜಕರಲ್ಲೊಬ್ಬನು ಬೇತೇಲಿನಲ್ಲಿ ವಾಸಿಸಲು ಬಂದನು. ಈ ಯಾಜಕನು ಜನರಿಗೆ, ಯೆಹೋವ ಭಕ್ತಿಯನ್ನು ಬೋಧಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸಮಾರ್ಯದಿಂದ ಸೆರೆಯವನಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು ಜನರಿಗೆ ಯೆಹೋವನ ಭಕ್ತಿಯನ್ನು ಬೋಧಿಸಿದನು.
Kannada BSI Bible 2016
ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸಮಾರ್ಯದಿಂದ ಸೆರೆಯವನಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು ಜನರಿಗೆ ಯೆಹೋವಭಕ್ತಿಯನ್ನು ಬೋಧಿಸಿದನು.
Kannada Bible (KNCL) BSI 2016
ಅವರು ಸಮಾರಿಯಾದಿಂದ ಸೆರೆಯವರಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು, ಜನರಿಗೆ ಸರ್ವೇಶ್ವರನ ಭಕ್ತಿಯನ್ನು ಬೋಧಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಸಮಾರ್ಯದಿಂದ ಕರೆತಂದ ಯಾಜಕರಲ್ಲಿ, ಒಬ್ಬನು ಬಂದು ಬೇತೇಲಿನಲ್ಲಿ ವಾಸವಾಗಿದ್ದು, ಅವರು ಯೆಹೋವ ದೇವರಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.