2 Kings 17:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವ್ವೀಯರು ಸುಳ್ಳುದೇವತೆಯಾದ ನಿಭಜ್ ಮತ್ತು ತರ್ತಕ್‌ಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ದೇವರುಗಳಾದ ಅದ್ರಮ್ಮೆಲೆಕ್ ಮತ್ತು ಅನ್ನಮ್ಮೆಲೆಕ್‌ಗಳನ್ನು ಗೌರವಿಸಲು ತಮ್ಮ ಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವ್ವಿಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಮಾಡಿ ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬ ತಮ್ಮ ಕುಲ ದೇವತೆಗಳನ್ನಾಗಿ ಪೂಜಿಸುತ್ತಾ ತಮ್ಮ ಮಕ್ಕಳನ್ನು ಬಲಿ ಅಗ್ನಿಪ್ರವೇಶ ಮಾಡಿಸುತ್ತಿದ್ದರು.
Kannada BSI Bible 2016
ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಮಾತಿನವರು ಅಷೀಮಾ, ಅವ್ವೀಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಪೂಜಿಸುತ್ತಿದ್ದರು. ಸೆಫರ್ವಯಿವಿುನವರು ತಮ್ಮ ಕುಲದೇವತೆಗಳಾಗಿರುವ ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬವುಗಳಿಗೋಸ್ಕರ ತಮ್ಮ ಮಕ್ಕಳನ್ನು ಆಹುತಿಕೊಡುತ್ತಿದ್ದರು.
Kannada Bible (KNCL) BSI 2016
ಹಮಾತಿನವರು ಅಷೀಮಾ, ಅವ್ವೀಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ತಮ್ಮ ಕುಲದೇವತೆಗಳಾಗಿರುವ ಅದ್ರೆಮ್ಮೆಲೆಕ್ ಹಾಗು ಅನಮೆಲೆಕ್ ಎಂಬುವುಗಳಿಗಾಗಿ ತಮ್ಮ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಮಾಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವ್ವೀಯರು ನಿಭಜ್, ತರ್ತಕ್ ಎಂಬ ದೇವತೆಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ಕುಲದೇವತೆಗಳಾದ ಅದ್ರಮ್ಮೆಲೆಕ್, ಅನಮ್ಮೇಲೆಕ್ ಎಂಬುವುಗಳಿಗಾಗಿ ತಮ್ಮ ಮಕ್ಕಳನ್ನು ಅಗ್ನಿಬಲಿ ಕೊಡುತ್ತಿದ್ದರು.