2 Kings 17:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಯೆಹೋವನಲ್ಲಿ ಭಕ್ತಿಯಿಟ್ಟಿದ್ದರು, ಆದರೆ ತಮ್ಮ ಸ್ವಂತ ದೇವರುಗಳ ಸೇವೆಯನ್ನೂ ಮಾಡಿದರು. ಅವರು ತಮ್ಮನ್ನು ತೆಗೆದುಕೊಂಡುಬಂದ ದೇಶಗಳಲ್ಲಿ ಮಾಡುತ್ತಿದ್ದಂತೆ ತಮ್ಮ ದೇವರುಗಳ ಸೇವೆಯನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಭಕ್ತರಾಗಿದ್ದರೂ ತಾವು ಬಿಟ್ಟು ಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.
Kannada BSI Bible 2016
ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಭಕ್ತರಾಗಿದ್ದರೂ ತಾವು ಬಿಟ್ಟುಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.
Kannada Bible (KNCL) BSI 2016
ಸರ್ವೇಶ್ವರನ ಭಕ್ತರಾಗಿದ್ದ ಅವರು ತಾವು ಬಿಟ್ಟುಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೆಹೋವ ದೇವರಿಗೆ ಆರಾಧನೆ ಮಾಡಿದರು. ಆದರೂ ಅವರು ಬಿಟ್ಟುಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳನ್ನು ಸಹ ಸೇವಿಸಿದರು.