2 Kings 17:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಇಸ್ರೇಲಿನ ಜನರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳನ್ನು ಪೂಜಿಸಬಾರದು; ನೀವು ಅವುಗಳಿಗೆ ಕೈಮುಗಿಯಬಾರದು; ಅವುಗಳ ಸೇವೆಯನ್ನು ಮಾಡಬಾರದು; ಅವುಗಳಿಗೆ ಯಜ್ಞಗಳನ್ನು ಅರ್ಪಿಸಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಸ್ರಾಯೇಲರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ, “ನೀವು ಅನ್ಯದೇವತೆಗಳಿಗೆ ಭಯಪಡಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಆರಾಧಿಸಲೂಬಾರದು, ಯಜ್ಞವನ್ನರ್ಪಿಸಲೂಬಾರದು.
Kannada BSI Bible 2016
ಕರ್ತನು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನೀವು ಇತರ ದೇವರುಗಳಿಗೆ ಭಯಪಡದೆ ಅಡ್ಡಬೀಳದೆ ಸೇವಿಸದೆ ಅವುಗಳಿಗೆ ಬಲಿ ಯನ್ನು ಅರ್ಪಿಸದೆ ಇರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಸ್ರಾಯೇಲ್ಯರಿಗೆ ನೀವು ಅನ್ಯದೇವತೆಗಳನ್ನು ಆರಾಧಿಸಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಸೇವೆಮಾಡಲೂ ಯಜ್ಞವರ್ಪಿಸಲೂಬಾರದು.
Kannada Bible (KNCL) BSI 2016
ಇಸ್ರಯೇಲರಿಗೆ ಸರ್ವೇಶ್ವರ, “ನೀವು ಅನ್ಯದೇವತೆಗಳನ್ನು ಆರಾಧಿಸಬಾರದು, ಅವುಗಳಿಗೆ ಕೈಮುಗಿಯಲೂಬಾರದು. ಸೇವೆಮಾಡಬಾರದು, ಬಲಿ ಅರ್ಪಿಸಲೂಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ, “ನೀವು ಇತರ ದೇವರುಗಳಿಗೆ ಭಯಪಡದೆ ಅವುಗಳಿಗೆ ಅಡ್ಡಬೀಳದೆ, ಅವುಗಳನ್ನು ಸೇವಿಸದೆ, ಅವುಗಳಿಗೆ ಬಲಿಯನ್ನು ಅರ್ಪಿಸದೆ ಇರಬೇಕು.