2 Kings 17:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೋಶೇಯನು ಈಜಿಪ್ಟಿನ ರಾಜನಲ್ಲಿಗೆ ಸಂದೇಶಕರನ್ನು ಕಳುಹಿಸಿದ್ದನು. ಈಜಿಪ್ಟಿನ ರಾಜನಿಗೆ ಸೋ ಎಂಬ ಹೆಸರಿತ್ತು. ಹೋಶೇಯನು ಅಶ್ಶೂರದ ರಾಜನಿಗೆ ಪ್ರತಿವರ್ಷ ಕಪ್ಪಕಾಣಿಕಯನ್ನು ಕೊಡುತ್ತಿದ್ದನು, ಆದರೆ ಆ ವರ್ಷ ಕೊಡಲಿಲ್ಲ. ಆದರೆ ಅಶ್ಶೂರದ ರಾಜನಿಗೆ ಹೋಶೇಯನು ತನ್ನ ವಿರುದ್ಧ ಮಾಡಿರುವ ಒಳಸಂಚು ತಿಳಿದುಬಂದಿತು. ಆದ್ದರಿಂದ ಅಶ್ಶೂರದ ರಾಜನು ಹೋಶೇಯನನ್ನು ಬಂಧಿಸಿ, ಸೆರೆಯಲ್ಲಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಲವು ವರ್ಷಗಳಾದ ನಂತರ ಅರಸನಾದ ಹೋಶೇಯನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದುದರಿಂದಲೂ, ಐಗುಪ್ತದ ಅರಸನಾದ ಸೋ ಎಂಬುವವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.
Kannada BSI Bible 2016
ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆಲವು ವರುಷಗಳಾದನಂತರ ಇವನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆ ಹೋದದರಿಂದಲೂ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.
Kannada Bible (KNCL) BSI 2016
ಕೆಲವು ವರ್ಷಗಳಾದನಂತರ, ಇವನು ಪ್ರತಿ ವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದನು; ಅದು ಮಾತ್ರವಲ್ಲ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದನು. ಈ ಕಾರಣ ಅಸ್ಸೀರಿಯದ ಅರಸನು ಇವನನ್ನು ದ್ರೋಹಿಯೆಂದು ತಿಳಿದು, ಬಂಧಿಸಿ ಸೆರೆಯಲ್ಲಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಸ್ಸೀರಿಯದ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನೆಂದರೆ, ಹೋಶೇಯನು ಅಸ್ಸೀರಿಯದ ಅರಸನಿಗೆ ವರ್ಷ ವರ್ಷಕ್ಕೂ ಕೊಡುವ ಕಪ್ಪವನ್ನು ಕೊಡದೆ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ದೂತರನ್ನು ಕಳುಹಿಸಿದನು. ಆದ್ದರಿಂದ ಅಸ್ಸೀರಿಯದ ಅರಸನು ಅವನನ್ನು ಕಟ್ಟಿ, ಸೆರೆಮನೆಯಲ್ಲಿ ಬಂಧಿಸಿದನು.