2 Kings 17:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನ್ಯಜನಾಂಗಗಳು ಯೆಹೋವನಲ್ಲಿ ಭಕ್ತಿಯಿಂದಿದ್ದರೂ ತಮ್ಮ ಸ್ವಂತ ವಿಗ್ರಹಗಳನ್ನು ಪೂಜಿಸುತ್ತಿದ್ದರು. ಅವರ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮ ಪೂರ್ವಿಕರು ಮಾಡಿದಂತಹ ಕಾರ್ಯಗಳನ್ನು ಮಾಡುತ್ತಿದ್ದರು. ಅವರು ಇಂದಿಗೂ ಇಂತಹ ಕಾರ್ಯಗಳನ್ನು ಮಾಡುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಜನಾಂಗಗಳವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೂ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.
Kannada BSI Bible 2016
ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಜನಾಂಗಗಳವರು ಯೆಹೋವ ಭಕ್ತರಾಗಿದ್ದರೂ ತಮ್ಮ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿರುತ್ತಾರೆ.
Kannada Bible (KNCL) BSI 2016
ಆ ಜನಾಂಗಗಳವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮ ವಿಗ್ರಹಗಳನ್ನು ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಯೆಹೋವ ದೇವರಿಗೆ ಇಂದಿನವರೆಗೂ ಭಯಪಡದೆ, ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು. ಇವರ ಪಿತೃಗಳು ಮಾಡಿದ ಹಾಗೆ, ಇವರೂ, ಇವರ ಮಕ್ಕಳೂ, ಇವರ ಮೊಮ್ಮಕ್ಕಳೂ ಮಾಡುತ್ತಿದ್ದಾರೆ.