2 Kings 17:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೋಶೇಯನು ಇಸ್ರೇಲಿನ ರಾಜನಾಗಿದ್ದ ಒಂಭತ್ತನೆಯ ವರ್ಷದಲ್ಲಿ ಅಶ್ಶೂರದ ರಾಜನು ಸಮಾರ್ಯವನ್ನು ಸ್ವಾಧೀನಪಡಿಸಿಕೊಂಡನು. ಅಶ್ಶೂರದ ರಾಜನು ಇಸ್ರೇಲರನ್ನು ಸೆರೆಯಾಳುಗಳನ್ನಾಗಿ ಒಯ್ದು ಹಲಹು ಪ್ರಾಂತ್ಯದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ಇರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.
Kannada BSI Bible 2016
ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.
Kannada Bible (KNCL) BSI 2016
ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.