2 Kings 18:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಶ್ಶೂರದ ರಾಜನು ಇಸ್ರೇಲರನ್ನು, ಸೆರೆಯಾಳುಗಳನ್ನಾಗಿ ಅಶ್ಶೂರಿಗೆ ಒಯ್ದನು. ಅವನು ಅವರನ್ನು ಹಲಹು ಎಂಬ ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ವಾಸಿಸುವಂತೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಶ್ಶೂರದ ಅರಸನು ಇಸ್ರಾಯೇಲರನ್ನು ಸೆರೆಹಿಡಿದು ಅವರನ್ನು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.
Kannada BSI Bible 2016
ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರನೆಯ ವರುಷದಲ್ಲಿ ಸ್ವಾಧೀನವಾಗಲು ಇಸ್ರಾಯೇಲ್ಯರನ್ನು ಸೆರೆಹಿಡಿದು ಹಲಹು, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ, ಮೇದ್ಯರ ಪಟ್ಟಣಗಳು ಇವುಗಳಿಗೆ ಕಳುಹಿಸಿದನು.
Kannada Bible (KNCL) BSI 2016
ಅವನು ಇಸ್ರಯೇಲರನ್ನು ಸೆರೆಹಿಡಿದು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳು ಇವುಗಳಿಗೆ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಸ್ಸೀರಿಯದ ಅರಸನು ಇಸ್ರಾಯೇಲರನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.