2 Kings 18:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಜ್ಕೀಯನು ರಾಜನಾಗಿದ್ದ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ರಾಜನಾದ ಸನ್ಹೇರೀಬನು ಯೆಹೂದದ ಬಲಾಢ್ಯ ನಗರಗಳ ವಿರುದ್ಧವಾಗಿ ಹೋರಾಡಲು ಹೋದನು. ಸನ್ಹೇರೀಬನು ಆ ನಗರಗಳನ್ನೆಲ್ಲ ಸೋಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
Kannada BSI Bible 2016
ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರುಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
Kannada Bible (KNCL) BSI 2016
ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.