2 Kings 18:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸಮಯದಲ್ಲಿ, ಹಿಜ್ಕೀಯನು ಯೆಹೋವನ ಆಲಯದ ಬಾಗಿಲುಗಳಿಗೆ ಮತ್ತು ಕದಗಳಿಗೆ ಹೊದಿಸಿದ್ದ ಬಂಗಾರವನ್ನು ಕತ್ತರಿಸಿಹಾಕಿದನು. ರಾಜನಾದ ಹಿಜ್ಕೀಯನು ಈ ಬಾಗಿಲುಗಳ ಮತ್ತು ಕದಗಳ ಮೇಲೆ ಬಂಗಾರವನ್ನು ಹೊದಿಸಿದ್ದನು. ಹಿಜ್ಕೀಯನು ಈ ಬಂಗಾರವನ್ನು ಅಶ್ಶೂರದ ರಾಜನಿಗೆ ನೀಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲದೆ ಹಿಜ್ಕೀಯನು ಯೆಹೋವನ ಆಲಯದ ಕದಗಳಿಗೂ, ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದು ಅಶ್ಶೂರದ ಅರಸನಿಗೆ ಕಳುಹಿಸಿದನು.
Kannada BSI Bible 2016
ಆ ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾನು ಯೆಹೋವನ ಆಲಯದ ಕದಗಳಿಗೂ ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಳುಹಿಸಿದನು.
Kannada Bible (KNCL) BSI 2016
ತಾನು ಸರ್ವೇಶ್ವರನ ಆಲಯದ ಕದಗಳಿಗೂ ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದುಕೊಂಡು ಅಸ್ಸೀರಿಯದ ಅರಸನಿಗೆ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಸಮಯದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು, ಯೆಹೋವ ದೇವರ ಮಂದಿರದ ಕದಗಳ ಮೇಲೆಯೂ, ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನೂ ಕತ್ತರಿಸಿ, ಅಸ್ಸೀರಿಯದ ಅರಸನಿಗೆ ಕೊಟ್ಟನು.