2 Kings 18:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೇನಾಧಿಪತಿಗಳಲ್ಲಿ ಒಬ್ಬನಾದ ರಬ್ಷಾಕೆಯು ಅವರಿಗೆ, “ಅಶ್ಶೂರದ ಮಹಾರಾಜನು ಹಿಜ್ಕೀಯನಿಗೆ ತಿಳಿಸುವುದೇನೆಂದರೆ: ನಿನ್ನ ನಂಬಿಕೆಗೆ ಆಧಾರವು ಎಲ್ಲಿದೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಬ್ಷಾಕೆಯು ಅವರಿಗೆ, ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ. ಅವನು, “ನಿನ್ನ ಭರವಸಕ್ಕೆ ಯಾವ ಆಧಾರವುಂಟು?
Kannada BSI Bible 2016
ಆಗ ರಬ್ಷಾಕೆಯು ಅವರಿಗೆ--ನೀವು ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ, ಮಹಾ ಅರಸನಾದ ಅಶ್ಶೂರಿನ ಅರಸನು ಹೇಳುವದೇನಂದರೆ, ಭರವಸವಾಗಿರುವ ಈ ನಂಬಿಕೆಯೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ರಬ್ಷಾಕೆಯು ಅವರಿಗೆ - ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ.
Kannada Bible (KNCL) BSI 2016
ರಬ್ಷಾಕೆಯು ಅವರಿಗೆ, “ನೀವು ಹೋಗಿ ಅಸ್ಸೀರಿಯದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ: ‘ನಿನ್ನ ಭರವಸೆಗೆ ಆಧಾರವಾದರೂ ಏನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “ ‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?