2 Kings 18:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಯುದ್ಧದಲ್ಲಿ ನನಗೆ ಸಹಾಯಮಾಡಲು ನನ್ನಲ್ಲಿ ಬೇಕಾದಷ್ಟು ವಿವೇಕವೂ ಬಲವೂ ಇದೆ’ ಎಂದು ನೀನು ಹೇಳುವೆ. ಆದರೆ ನೀನು ಯಾರನ್ನು ನಂಬಿಕೊಂಡು ನನಗೆ ವಿರುದ್ಧವಾಗಿ ದಂಗೆ ಎದ್ದಿರುವೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬರೀ ಒಂದು ಬಾಯಿ ಮಾತಿನಲ್ಲಿ ಯುದ್ಧಕ್ಕೆ ಬೇಕಾದ ವಿವೇಕವೂ, ಬಲವೂ ಉಂಟೆಂದು ಅಂದುಕೊಳ್ಳುತ್ತಿರುವೆಯೋ? ನೀನು ಯಾರ ಮೇಲೆ ಭರವಸವಿಟ್ಟು ನನಗೆ ವಿರೋಧವಾಗಿ ತಿರುಗಿ ಬಿದ್ದಿರುವೆ?
Kannada BSI Bible 2016
ಯುದ್ಧ ಕ್ಕಾಗಿ ಯೋಚನೆಯೂ ಪರಾಕ್ರಮವೂ ಉಂಟೆಂದು ನೀನು ಹೇಳುತ್ತೀ. ಆದರೆ ಅವು ವ್ಯರ್ಥವಾದ ಮಾತು ಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ನಿನ್ನ ಭರವಸಕ್ಕೆ ಯಾವ ಆಧಾರವುಂಟು? ಬರೀ ಒಂದು ಬಾಯಿಮಾತಿನ ಮೇಲೆ ಯುದ್ಧಕ್ಕೆ ಬೇಕಾದ ವಿವೇಕವೂ ಬಲವೂ ಉಂಟೆಂದು ಅಂದುಕೊಳ್ಳುತ್ತೀ; ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀ?
Kannada Bible (KNCL) BSI 2016
ಬರಿ ಬಾಯಿಮಾತೊಂದರಿಂದ ಯುದ್ಧಕ್ಕೆ ಬೇಕಾದ ವಿವೇಕ ಹಾಗು ಶಕ್ತಿ ಉಂಟೆಂದು ಅರಿತುಕೊಂಡಿರುವೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ಎದ್ದಿರುವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುದ್ಧಕ್ಕೆ ಬೇಕಾದ ಆಲೋಚನೆಯೂ, ಪರಾಕ್ರಮವೂ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀಯೆ?