2 Kings 18:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಹುಶಃ ನೀನು, “ನಾವು ನಮ್ಮ ದೇವರಾದ ಯೆಹೋವನಲ್ಲಿ ಭರವಸೆಯಿಟ್ಟಿದ್ದೇವೆ” ಎಂದು ಹೇಳುವೆ. ಆದರೆ ಹಿಜ್ಕೀಯನು ಯೆಹೋವನ ಉನ್ನತಸ್ಥಳಗಳನ್ನು ಮತ್ತು ಯಜ್ಞವೇದಿಕೆಯನ್ನು ನಾಶಪಡಿಸಿ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯ ಸನ್ನಿಧಿಯಲ್ಲಿ ಮಾತ್ರ ಆರಾಧಿಸಬೇಕು” ಎಂದು ಹೇಳಿದನೆಂಬುದು ನನಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ವೇಳೆ ನೀವು, ‘ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ’ ಎಂದು ಹೇಳುವುದಾದರೆ ಹಿಜ್ಕೀಯನು, ‘ಯೆರೂಸಲೇಮಿನ ಯಜ್ಞವೇದಿಯ ಮುಂದೆಯೇ ಆರಾಧನೆಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ, ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದ್ದಾನಲ್ಲಾ,
Kannada BSI Bible 2016
ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ವೇಳೆ ನೀವು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಯೆರೂಸಲೇವಿುನ ಯಜ್ಞವೇದಿಯ ಮುಂದೆಯೇ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!
Kannada Bible (KNCL) BSI 2016
“ಬಹುಶಃ, ನೀವು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ,’ ಎಂದು ಹೇಳಬಹುದು. ಜೆರುಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೂ ಮತ್ತು ಜೆರುಸಲೇಮಿನವರಿಗೂ ಹಿಜ್ಕೀಯನು ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು,” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?