2 Kings 18:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನಮ್ಮ ಒಡೆಯನಾದ ಅಶ್ಶೂರದ ರಾಜನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊ. ನಿನ್ನಲ್ಲಿ ಸವಾರಿಮಾಡಬಲ್ಲ ಸವಾರರು ಇದ್ದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆಂದು ನಾನು ಪ್ರಮಾಣ ಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಸವಾಲು ಮಾಡಿನೋಡು. ಆಗ ಕುದುರೆ ಸವಾರರನ್ನು ಬಳಸಲು ನಿನಗೆ ಸಾಮರ್ಥ್ಯವಿದ್ದರೆ ಆತನು ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ.
Kannada BSI Bible 2016
ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಪಂಥಹಾಕುವದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ; ನೀನು ಎಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ?
Kannada Bible (KNCL) BSI 2016
ಆದುದರಿಂದ ಬಾ, ಬಂದು ನನ್ನ ಒಡೆಯರಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಹಾಗಾದರೆ ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.