2 Kings 18:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನ ಅಧಿಕಾರಿಗಳಲ್ಲಿ ಕನಿಷ್ಠನಾದ ಒಬ್ಬ ಅಧಿಕಾರಿಯನ್ನು ನೀನು ಸೋಲಿಸಲಾಗುವುದಿಲ್ಲ! ನಿನಗೆ ರಥಗಳನ್ನು ಮತ್ತು ಕುದುರೆಯ ಸವಾರರನ್ನು ಕೊಡಲು ನೀನು ಈಜಿಪ್ಟನ್ನು ಅವಲಂಬಿಸಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿದ್ದಾಗ ನೀನು ನನ್ನ ಒಡೆಯನ ಸೇನಾಧಿಪತಿಗಳಲ್ಲಿ ಅತಿ ಸಣ್ಣವನನ್ನಾದರೂ ಸೋಲಿಸುವುದು ಸಾಧ್ಯವೇ? ರಥಾಶ್ವಬಲಗಳ ವಿಷಯವಾಗಿ ನೀನು ಐಗುಪ್ತರ ಮೇಲೆ ಭರವಸೆಯಿಟ್ಟಿರುವೆ.
Kannada BSI Bible 2016
ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇದೂ ನಿನಗೆ ಅಸಾಧ್ಯವಾಗುವದಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವದು ಹೇಗೆ? ರಥಾಶ್ವಬಲಗಳ ವಿಷಯವಾಗಿ ಐಗುಪ್ತ್ಯರನ್ನು ನಂಬಿರುತ್ತೀಯೆಂದು ಕಾಣುತ್ತದೆ.
Kannada Bible (KNCL) BSI 2016
ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ ತಾನೆ ಸಾಧ್ಯ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ?