2 Kings 18:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಯೆಹೋವನ ಚಿತ್ತವಿಲ್ಲದೆ ಜೆರುಸಲೇಮನ್ನು ನಾಶಗೊಳಿಸಲು ಬಂದೆನೆಂದು ನೆನಸುತ್ತೀಯೋ? “ಈ ದೇಶದ ವಿರುದ್ಧವಾಗಿ ನುಗ್ಗಿ ನಾಶಗೊಳಿಸು” ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಈ ದೇಶಕ್ಕೆ ಬಂದು, ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದ್ದಾನೆ’” ಎಂದನು.
Kannada BSI Bible 2016
ಈ ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದೇಶವನ್ನು ಹಾಳುಮಾಡುವದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಅನ್ನುತ್ತಾನೆ ಎಂದನು.
Kannada Bible (KNCL) BSI 2016
ಈ ನಾಡನ್ನು, ಹಾಳುಮಾಡುವುದಕ್ಕೆ ಸರ್ವೇಶ್ವರಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರಸ್ವಾಮಿಯೇ ನನಗೆ ಆಜ್ಞೆ ಮಾಡಿದ್ದಾರೆ, ಎಂಬ ಈ ಮಾತುಗಳು ಅರಸನವು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’ ” ಎಂದನು.