2 Kings 18:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಸೇನಾಧಿಪತಿಯು ಯೂದಾಯ ಭಾಷೆಯಲ್ಲಿ ಗಟ್ಟಿಯಾಗಿ, “ಅಶ್ಶೂರದ ಮಹಾರಾಜನ ಈ ಸಂದೇಶವನ್ನು ಕೇಳಿರಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂತರ, ರಬ್ಷಾಕೆಯು ಎದ್ದು ನಿಂತು ಯೂದಾಯ ಭಾಷೆಯಲ್ಲಿ, “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ.
Kannada BSI Bible 2016
ಆಗ ರಬ್ಷಾಕೆಯು ನಿಂತು ಕೊಂಡು ಯೆಹೂದ್ಯರ ಭಾಷೆಯಲ್ಲಿ ಮಹಾ ಶಬ್ದವಾಗಿ ಕೂಗಿ ಹೇಳಿದ್ದೇನಂದರೆ -- ಮಹಾ ಅರಸನಾದ ಅಶ್ಶೂರಿನ ಅರಸನ ಮಾತನ್ನು ಕೇಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ - ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ;
Kannada Bible (KNCL) BSI 2016
ಬಳಿಕ ಆ ದಳಪತಿಯು ಆ ಗೋಡೆಯ ಮೇಲೆ ನಿಂತಿದ್ದವರನ್ನು ಉದ್ದೇಶಿಸಿ ಹಿಬ್ರೂ ಭಾಷೆಯಲ್ಲೇ, “ನೀವು ಅಸ್ಸೀರಿಯದ ರಾಜಾಧಿರಾಜನ ಮಾತನ್ನು ಕೇಳಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ರಬ್ಷಾಕೆ ನಿಂತುಕೊಂಡು ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನೆಂದರೆ, “ನೀವು ಅಸ್ಸೀರಿಯದ ಮಹಾರಾಜನ ಮಾತನ್ನು ಕೇಳಿರಿ.