2 Kings 18:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನನ್ನು ನೀವು ನಂಬುವಂತೆ ಮಾಡಲು ಹಿಜ್ಕೀಯನಿಗೆ ಅವಕಾಶ ನೀಡಬೇಡಿ! ‘ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ! ಅಶ್ಶೂರದ ರಾಜನು ಈ ನಗರವನ್ನು ಸೋಲಿಸಲಾಗುವುದಿಲ್ಲ!’ ಎಂದು ಹಿಜ್ಕೀಯನು ಹೇಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಜ್ಕೀಯನು ನಿಮಗೆ, ‘ಯೆಹೋವನ ಮೇಲೆ ಭರವಸದಿಂದಿರಿ; ಆತನು ನಿಮ್ಮನ್ನು ಹೇಗೂ ರಕ್ಷಿಸುವನು. ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’ ಎಂಬುದಾಗಿ ಹೇಳಿದರೆ ಅವನ ಮಾತಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ”
Kannada BSI Bible 2016
ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಜ್ಕೀಯನು ನಿಮಗೆ - ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೂ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂಬದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿರಿ, ಒಪ್ಪಬೇಡಿರಿ.
Kannada Bible (KNCL) BSI 2016
ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲೇ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರು, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ, ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವನು.