2 Kings 18:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ!” ಎಂದು ಹೇಳಿದನು.“ಅಶ್ಶೂರದ ರಾಜ ಹೀಗೆ ಹೇಳುತ್ತಾನೆ: ‘ನನ್ನೊಂದಿಗೆ ಶಾಂತಿಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿರಿ. ನಂತರ ಪ್ರತಿಯೊಬ್ಬರೂ ತನ್ನ ಸ್ವಂತ ದ್ರಾಕ್ಷಿಯನ್ನು ತಿನ್ನಬಹುದು; ತನ್ನ ಸ್ವಂತ ಅಂಜೂರವನ್ನು ತಿನ್ನಬಹುದು; ತನ್ನ ಸ್ವಂತ ಬಾವಿಯಿಂದ ನೀರನ್ನು ಕುಡಿಯಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, “ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.
Kannada BSI Bible 2016
ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.
Kannada Bible (KNCL) BSI 2016
ಅಸ್ಸೀರಿಯದ ಅರಸನಾದ ನನ್ನ ಮಾತನ್ನು ಕೇಳಿ; ನನ್ನೊಡನೆ ಒಪ್ಪಂದಮಾಡಿಕೊಂಡು ನನ್ನ ಆಶ್ರಯವನ್ನು ಸೇರಿರಿ, ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗು ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನೇ ಕುಡಿಯುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ: ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.