2 Kings 18:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೇರೆ ಜನಾಂಗಗಳ ದೇವತೆಗಳು ಯಾವುದಾದರೂ ತಮ್ಮ ದೇಶವನ್ನು ನನ್ನಿಂದ ರಕ್ಷಿಸುತ್ತವೆಯೇ? ಇಲ್ಲ! ಜೆರುಸಲೇಮನ್ನು ಯೆಹೋವನು ನನ್ನಿಂದ ರಕ್ಷಿಸುತ್ತಾನೆಯೇ ಇಲ್ಲ!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಆಗದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.
Kannada BSI Bible 2016
ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವನೋ ಅನ್ನುತ್ತಾನೆ ಎಂದು ಹೇಳಿದನು.
Kannada Bible (KNCL) BSI 2016
ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಕೈಯಿಂದ ಬಿಡಿಸಲಾಗದೆ ಹೋದಮೇಲೆ ಜೆರುಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸರ್ವೇಶ್ವರನಿಗೆ ಸಾಧ್ಯವೋ?”, ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.