2 Kings 18:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಜನರೆಲ್ಲರೂ ಸುಮ್ಮನಿದ್ದರು, ರಾಜನಾದ ಹಿಜ್ಕೀಯನು ಜನರಿಗೆ ಆಜ್ಞಾಪಿಸಿದ್ದರಿಂದ ಅವರು ಸೇನಾಧಿಪತಿಯೊಂದಿಗೆ ಒಂದು ಮಾತನ್ನೂ ಆಡಲಿಲ್ಲ. “ಅವನಿಗೆ ಏನನ್ನೂ ಹೇಳಬೇಡಿ” ಎಂದು ಹಿಜ್ಕೀಯನು ಹೇಳಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸೇನಾಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು. ಏನೂ ಹೇಳಲಿಲ್ಲ.
Kannada BSI Bible 2016
ಆದರೆ ಜನರು ಅವನಿಗೆ ಪ್ರತ್ಯುತ್ತರವನ್ನು ಹೇಳದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಪ್ರತ್ಯುತ್ತರ ಹೇಳಬೇಡಿ ಎಂದು ಅವರಿಗೆ ಅರಸನ ಆಜ್ಞೆ ಇತ್ತು.ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸೇನಾಪತಿಗಳಿಗೆ ಯಾವ ಉತ್ತರವನ್ನೂ ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಸುಮ್ಮನಿದ್ದರು; ಏನೂ ಅನ್ನಲಿಲ್ಲ.
Kannada Bible (KNCL) BSI 2016
ಆ ಸೇನಾಧಿಪತಿಗೆ ಯಾವ ಉತ್ತರವನ್ನು ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಏನನ್ನೂ ಹೇಳದೆ ಸುಮ್ಮನಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಜನರು ಅವನಿಗೆ ಪ್ರತ್ಯುತ್ತರ ಕೊಡದೆ ಸುಮ್ಮನಿದ್ದರು. ಏಕೆಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.