2 Kings 18:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಹಿಜ್ಕೀಯನ ಬಳಿಗೆ ಬಂದರು. ಅವರು ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡಿದ್ದರು. ಅಶ್ಶೂರದ ಸೇನಾಧಿಪತಿಯಾದ ರಬ್ಷಾಕೆಯು ಹೇಳಿದ ಸಂಗತಿಗಳನ್ನು ಅವರು ಹಿಜ್ಕೀಯನಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್ ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
Kannada BSI Bible 2016
ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
Kannada Bible (KNCL) BSI 2016
ಬಳಿಕ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ, ಎಂಬವರು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ, ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.