2 Kings 18:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು ‘ನೆಹುಷ್ಟಾನ್’ ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್ ” ಎಂಬ ಹೆಸರಿತ್ತು.
Kannada BSI Bible 2016
ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೂಜಾಸ್ಥಳಗಳನ್ನು ಹಾಳುಮಾಡಿ ಕಲ್ಲುಕಂಬಗಳನ್ನು ಒಡೆದು ಅಶೇರವಿಗ್ರಹ ಸ್ತಂಭಗಳನ್ನು ಕಡಿದುಹಾಕಿದನು; ಮೋಶೆಯು ಮಾಡಿಸಿದ ತಾಮ್ರಸರ್ಪವನ್ನು ಚೂರು ಚೂರು ಮಾಡಿದನು. ಇಸ್ರಾಯೇಲ್ಯರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ನೆಹುಷ್ಟಾನ್ ಎಂಬ ಹೆಸರಿತ್ತು;
Kannada Bible (KNCL) BSI 2016
ಪೂಜಾಸ್ಥಳಗಳನ್ನು ಹಾಳುಮಾಡಿದನು. ಕಲ್ಲುಗಂಬಗಳನ್ನು ಒಡೆದುಹಾಕಿದನು. ಅಶೇರ ವಿಗ್ರಹಸ್ಥಂಭಗಳನ್ನು ಕೆಡವಿಬಿಟ್ಟನು. ಮೋಶೆ ಮಾಡಿಸಿದ ತಾಮ್ರಸರ್ಪವನ್ನು ಚೂರುಚೂರು ಮಾಡಿದನು. ಇಸ್ರಯೇಲರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ‘ನೆಹುಷ್ಟಾನ್’ ಎಂಬ ಹೆಸರಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.