2 Kings 18:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಜ್ಕೀಯನು ಇಸ್ರೇಲಿನ ದೇವರಾದ ಯೆಹೋವನಲ್ಲಿ ನಂಬಿಕೆಯಿಟ್ಟನು. ಯೆಹೂದದ ರಾಜರುಗಳಲ್ಲೆಲ್ಲಾ ಹಿಜ್ಕೀಯನಂಥವರು ಅವನ ಮುಂಚೆಯಾಗಲಿ ಅವನ ನಂತರವಾಗಲಿ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ.
Kannada BSI Bible 2016
ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಮುಂಚೆಯೂ ತರುವಾಯವೂ ಇರಲಿಲ್ಲ.
Kannada Bible (KNCL) BSI 2016
ಇವನು ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯಲ್ಲೆ ಭರವಸೆಯಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಜ್ಕೀಯನು ಇಸ್ರಾಯೇಲಿನ ಯೆಹೋವ ದೇವರಲ್ಲಿ ಭರವಸೆವುಳ್ಳವನಾಗಿದ್ದನು. ಅವನಿಗೆ ಮುಂಚೆ ಇದ್ದವರಲ್ಲಿಯೂ, ಅವನ ತರುವಾಯ ಯೆಹೂದದ ಸಮಸ್ತ ಅರಸುಗಳಲ್ಲಿಯೂ ಅವನ ಹಾಗೆ ಒಬ್ಬರೂ ಇರಲಿಲ್ಲ.