2 Kings 18:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಜ್ಕೀಯನು ಯೆಹೋವನಿಗೆ ಬಹಳ ನಂಬಿಕೆಯುಳ್ಳವನಾಗಿದ್ದನು. ಅವನು ಯೆಹೋವನನ್ನು ಅನುಸರಿಸುವುದನ್ನು ನಿಲ್ಲಿಸಲೇ ಇಲ್ಲ. ಯೆಹೋವನು ಮೋಶೆಗೆ ನೀಡಿದ ಆಜ್ಞೆಗಳಿಗೆ ಅವನು ವಿಧೇಯನಾಗಿ ಅನುಸರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು.
Kannada BSI Bible 2016
ಅವನು ಕರ್ತನನ್ನು ಹಿಂಬಾಲಿಸುವದನ್ನು ಬಿಟ್ಟುಬಿಡದೆ ಆತನಿಗೆ ಹೊಂದಿಕೊಂಡು ಕರ್ತನು ಮೋಶೆಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಕೈಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಇವನು ಯೆಹೋವನನ್ನೇ ಹೊಂದಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ ಆತನು ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಯನ್ನು ಕೈಕೊಂಡನು.
Kannada Bible (KNCL) BSI 2016
ಇದಲ್ಲದೆ, ಇವನು ಸರ್ವೇಶ್ವರನನ್ನೇ ಹೊಂದಿಕೊಂಡು ಅವರನ್ನು ಬಿಡದೆ ಅನುಸರಿಸುತ್ತಾ, ಅವರು ಮೋಶೆಯ ಮುಖಾಂತರ ಅನುಗ್ರಹಿಸಿದ ಆಜ್ಞೆಗಳನ್ನು ಕೈಗೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟುಬಿಡದೆ, ದೇವರನ್ನೇ ಆತುಕೊಂಡು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನು ಕೈಗೊಂಡನು.