2 Kings 18:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹಿಜ್ಕೀಯನೊಂದಿಗಿದ್ದನು. ಹಿಜ್ಕೀಯನು ತಾನು ಮಾಡಿದ್ದರಲ್ಲೆಲ್ಲಾ ಜಯಗಳಿಸಿದನು. ಹಿಜ್ಕೀಯನು ಅಶ್ಶೂರದ ರಾಜನೊಂದಿಗಿದ್ದ ಸಂಬಂಧವನ್ನು ಕಡಿದುಹಾಕಿದನು. ಅಶ್ಶೂರದ ರಾಜನ ಸೇವೆಯನ್ನು ಹಿಜ್ಕೀಯನು ನಿಲ್ಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹಿಜ್ಕೀಯನ ಸಂಗಡ ಇದ್ದುದರಿಂದ ಅವನು ಹೋದ ಎಲ್ಲ ಕಡೆ ಅಭಿವೃದ್ಧಿ ಹೊಂದಿದನು. ಇವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ದಂಗೆ ಎದ್ದು ಸ್ವತಂತ್ರನಾದನು.
Kannada BSI Bible 2016
ಕರ್ತನು ಅವನ ಸಂಗಡ ಇದ್ದನು; ಅವನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಗುತ್ತಿತ್ತು. ಅವನು ಅಶ್ಶೂರಿನ ಅರಸ ನನ್ನು ಸೇವಿಸದೆ ಅವನ ಮೇಲೆ ತಿರುಗಿ ಬಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇವನ ಸಂಗಡ ಇದ್ದದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಶ್ಶೂರದ ಅರಸನಿಗೆ ವಿರೋಧವಾಗಿ ತಿರುಗಿಬಿದ್ದು ಸ್ವತಂತ್ರನಾದನು.
Kannada Bible (KNCL) BSI 2016
ಸರ್ವೇಶ್ವರ ಇವನ ಸಂಗಡ ಇದ್ದುದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಸ್ಸೀರಿಯದ ಅರಸನಿಗೆ ವಿರುದ್ಧ ದಂಗೆಯೆದ್ದು ಸ್ವತಂತ್ರನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಅವನ ಸಂಗಡ ಇದ್ದರು. ಹಿಜ್ಕೀಯನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಯಿತು. ಅವನು ಅಸ್ಸೀರಿಯದ ಅರಸನನ್ನು ಸೇವಿಸದೆ, ಅವನ ಮೇಲೆ ತಿರುಗಿಬಿದ್ದನು.