2 Kings 19:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ರಾಜನಾದ ಹಿಜ್ಕೀಯನಿಗೆ ಇದನ್ನು ಹೇಳಿ: “ನೀನು ನಂಬುವ ದೇವರು ನಿನ್ನನ್ನು ಮೋಸಗೊಳಿಸಲು ಅವಕಾಶ ನೀಡಬೇಡ. ಅಶ್ಶೂರದ ರಾಜ ಜೆರುಸಲೇಮನ್ನು ಸೋಲಿಸುವುದಿಲ್ಲ ಎಂಬ ನಿನ್ನ ದೇವರ ಮಾತನ್ನು ನಂಬಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಕೀಯನಿಗೆ, ‘ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ
Kannada BSI Bible 2016
ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಮುಖಾಂತರವಾಗಿ ಅವನಿಗೆ - ನೀನು ನಂಬುವ ದೇವರು - ನಾನು ಯೆರೂಸಲೇಮನ್ನು ಅಶ್ಶೂರದ ಅರಸನ ಕೈಗೆ ಒಪ್ಪಿಸುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.
Kannada Bible (KNCL) BSI 2016
“ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ನಿನಗೆ ಹೇಳಿ ನಿನ್ನನ್ನು ಮೋಸಗೊಳಿಸಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನೆಂದರೆ: ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.