2 Kings 19:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಶ್ಶೂರದ ರಾಜನು ಇತರ ಎಲ್ಲಾ ಜನಾಂಗಗಳಿಗೆ ಮಾಡಿದವುಗಳನ್ನು ನೀನು ಕೇಳಿರುವೆ. ನಾವು ಅವರನ್ನು ಸಂಪೂರ್ಣವಾಗಿ ನಾಶಗೊಳಿಸಿದೆವು! ನೀನು ರಕ್ಷಿಸಲ್ಪಡುವೆಯಾ? ಇಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಶ್ಶೂರದ ಅರಸುಗಳು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿರುವರೆಂದು ಕೇಳಿರುವೆಯಲ್ಲಾ. ಹೀಗಿದ್ದ ಮೇಲೆ ನೀನು ತಪ್ಪಿಸಿಕೊಳ್ಳುವೆಯೋ?
Kannada BSI Bible 2016
ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅಶ್ಶೂರದ ಅರಸರು ಎಲ್ಲಾ ರಾಜ್ಯಗಳನ್ನು ಪೂರ್ಣವಾಗಿ ನಾಶಮಾಡಿದರೆಂದು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಉಳಿಯುವಿಯೋ?
Kannada Bible (KNCL) BSI 2016
ಅಸ್ಸೀರಿಯದ ಅರಸನು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಪಡಿಸಿದ್ದಾನೆಂಬ ಸಮಾಚಾರ ನಿನಗೆ ಮುಟ್ಟಿರಬೇಕು, ಹೀಗಿರುವಲ್ಲಿ ನೀನು ಮಾತ್ರ ತಪ್ಪಿಸಿಕೊಳ್ಳುವಿಯೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?