2 Kings 19:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಜ್ಕೀಯನು ಯೆಹೋವನ ಸನ್ನಿಧಿಯಲ್ಲಿ, “ಯೆಹೋವನೇ, ಕೆರೂಬಿಗಳ ಮೇಲೆ ರಾಜನಾಗಿ ಕುಳಿತುಕೊಳ್ಳುವ ಇಸ್ರೇಲರ ದೇವರೇ, ಲೋಕದ ರಾಜ್ಯಗಳಿಗೆಲ್ಲಾ ನೀನೊಬ್ಬನೇ ದೇವರಾಗಿರುವೆ. ನೀನು ಪರಲೋಕವನ್ನು ಮತ್ತು ಈ ಲೋಕವನ್ನು ಸೃಷ್ಟಿಸಿದೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಜ್ಕೀಯನು ಯೆಹೋವನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲರ ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕಭೂಲೋಕಗಳನ್ನು ಉಂಟುಮಾಡಿದವನು ನೀನೇ.
Kannada BSI Bible 2016
ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್‍ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ.
Kannada Bible (KNCL) BSI 2016
“ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.