2 Kings 19:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ದಯವಿಟ್ಟು ನನ್ನ ಮಾತುಗಳನ್ನು ಆಲಿಸು! ಯೆಹೋವನೇ, ನಿನ್ನ ಕಣ್ಣುಗಳನ್ನು ತೆರೆದು, ಈ ಪತ್ರವನ್ನು ನೋಡು. ಸನ್ಹೇರೀಬನು ಜೀವಸ್ವರೂಪನಾದ ದೇವರನ್ನು ನಿಂದಿಸಿ ಕಳುಹಿಸಿರುವ ಈ ವಾಕ್ಯವನ್ನು ಕೇಳು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವುದಕ್ಕೋಸ್ಕರ ಹೇಳಿ ಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.
Kannada BSI Bible 2016
ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.
Kannada Bible (KNCL) BSI 2016
ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.