2 Kings 19:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಆ ದೇಶಗಳ ದೇವರುಗಳನ್ನು ಬೆಂಕಿಯಲ್ಲಿ ಎಸೆದರು. ಆದರೆ ಅವು ನಿಜವಾದ ದೇವರುಗಳಲ್ಲ. ಅವುಗಳು ಮಾನವರಿಂದ ಮರ ಮತ್ತು ಕಲ್ಲುಗಳಿಂದ ನಿರ್ಮಿತವಾಗಿದ್ದವು. ಆದಕಾರಣವೇ ಅಶ್ಶೂರದ ರಾಜರುಗಳು ಅವುಗಳನ್ನು ನಾಶಗೊಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.
Kannada BSI Bible 2016
ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವುಗಳನ್ನು ಹಾಳು ಮಾಡುವದು ಅವರಿಗೆ ಸಾಧ್ಯವಾಯಿತು.
Kannada Bible (KNCL) BSI 2016
ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.