2 Kings 19:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಜ್ಕೀಯನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಹಿರಿಯರಾದ ಯಾಜಕರನ್ನು ಆಮೋಚನ ಮಗನೂ ಪ್ರವಾದಿಯೂ ಆಗಿದ್ದ ಯೆಶಾಯನ ಬಳಿಗೆ ಕಳುಹಿಸಿದನು. ಅವರು ತಮ್ಮ ದುಃಖವನ್ನೂ ಕಳವಳವನ್ನೂ ತೋರ್ಪಡಿಸುವಂತೆ ಗೋಣಿತಟ್ಟನ್ನು ಧರಿಸಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.
Kannada BSI Bible 2016
ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ವೃದ್ಧಯಾಜಕರು ಇವರನ್ನು ಕರಿಸಿ ಅವರಿಗೆ ಆಜ್ಞಾಪಿಸಿದ್ದೇನಂದರೆ - ನೀವು ಗೋಣೀತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಅವನಿಗೆ -
Kannada Bible (KNCL) BSI 2016
ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು, ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.