2 Kings 19:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಈ ಸಂದೇಶವನ್ನು ಕಳುಹಿಸಿದನು: “ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ, ‘ಅಶ್ಶೂರದ ರಾಜನಾದ ಸನ್ಹೇರೀಬನ ವಿರುದ್ಧವಾಗಿ ನೀವು ನನ್ನಲ್ಲಿ ಪಾರ್ಥಿಸಿರುವಿರಿ. ನಾನು ನಿಮ್ಮ ಪ್ರಾರ್ಥನೆಯನ್ನು ಕೇಳಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನು ಹೀಗೆ ಅನ್ನುತ್ತಾನೆ, ‘ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆ.’
Kannada BSI Bible 2016
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನಂದರೆ - ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿದ್ದೇನೆಂಬದಾಗಿ ಇಸ್ರಾಯೇಲ್‍ದೇವರಾದ ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ: ” ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಈ ಮಾತುಗಳನ್ನು ಕೇಳು: ನೀನು ಅಸ್ಸೀರಿಯದ ರಾಜನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರಸ್ವಾಮಿಗೆ ಮುಟ್ಟಿವೆ. ಅವರು ಅವನನ್ನು ಕುರಿತು ಹೀಗೆಂದಿದ್ದಾರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ: “ಇಸ್ರಾಯೇಲಿನ ಯೆಹೋವ ದೇವರ ಮಾತಿದು: ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು ಮಾಡಿದ ಪ್ರಾರ್ಥನೆಯನ್ನು ಕೇಳಿದ್ದೇನೆ.