2 Kings 19:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಯಾರನ್ನು ನಿಂದಿಸಿ ಪರಿಹಾಸ್ಯ ಮಾಡಿದೆ? ನೀನು ಯಾರ ವಿರುದ್ಧ ಮಾತನಾಡಿದೆ? ನೀನು ಇಸ್ರೇಲಿನ ಪವಿತ್ರನಿಗೆ ವಿರೋಧಿಯಲ್ಲವೆ! ನೀನು ಅವನಿಗಿಂತ ಉತ್ತಮನಂತೆ ನಟಿಸಿದೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ದೀ? ಯಾರ ವಿರುದ್ಧವಾಗಿ ಬಾಯ್ದೆರೆದು ಹೀಯಾಳಿಸಿದ್ದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!
Kannada BSI Bible 2016
ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!
Kannada Bible (KNCL) BSI 2016
ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಸದಮಲಸ್ವಾಮಿಯನ್ನು ಅಲ್ಲವೇನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಯಾರನ್ನು ನಿಂದಿಸಿ, ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?