2 Kings 19:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ನೀನು ಕೇಳಿಲ್ಲವೇ? ನಾನು ಬಹುಕಾಲದ ಹಿಂದೆಯೇ ಅದನ್ನು ಯೋಜಿಸಿದ್ದೆನು. ಪುರಾತನ ಕಾಲದಿಂದಲೇ ಅದನ್ನು ಆಲೋಚಿಸಿದ್ದೆನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ನೀನು ಬಲಾಢ್ಯ ನಗರಗಳನ್ನು ಹಾಳುದಿಬ್ಬಗಳನ್ನಾಗಿ ಮಾಡಲು ಅವಕಾಶ ನೀಡಿದವನು ನಾನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ? ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?
Kannada BSI Bible 2016
ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೇಳು, ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು; ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದದರಿಂದ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು.
Kannada Bible (KNCL) BSI 2016
“ಕೇಳು, ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತುಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳುದಿಬ್ಬಗಳನ್ನಾಗಿಸಿದೆ. ಆದರೆ ಸಾಧ್ಯವಾಯಿತಿದು ನನ್ನಿಂದಲೇ; ನಿನಗಿದು ತಿಳಿಯದೆ ಹೋಯಿತೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ.