2 Kings 19:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಗರಗಳಲ್ಲಿ ವಾಸಿಸುವ ಜನರು ಬಲವಿಲ್ಲದವರಾಗಿ ನಿರಾಶೆಯಿಂದ ಗಲಿಬಿಲಿಗೊಂಡರು. ಜನರು ಹೊಲಗಳಲ್ಲಿನ ಹುಲ್ಲಿನಂತೆಯೂ ಹಸಿರುಗಿಡಗಳಂತೆಯೂ ಮಾಳಿಗೆಯ ಮೇಲೆ ಒಣಗಿ ಹಾಳಾಗುವ ಹುಲ್ಲಿನಂತೆಯೂ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಹೆದರಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಗಿಡಕ್ಕೂ ಕಾಯಿ ಪಲ್ಯಕ್ಕೂ ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು.
Kannada BSI Bible 2016
ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ ಒಣಗಿಹೋದ ಪೈರಿಗೂ ಸಮಾನರಾದರು.
Kannada Bible (KNCL) BSI 2016
ಬಲವಿಲ್ಲದವರಾದರು ಆ ನಗರವಾಸಿಗಳು ನನ್ನ ನಿಮಿತ್ತವೆ, ಸಮಾನರಾದರು ಹೊಲದ ಸಸಿಗೆ, ಎಳೆಗರಿಕೆಗೆ, ಮಾಳಿಗೆ ಮೇಲಿನ ಹುಲ್ಲಿಗೆ; ಬೆಳೆಯುವುದಕ್ಕೆ ಮೊದಲೆ ತುತ್ತಾದರು ಬಿರುಗಾಳಿಯ ಹೊಡೆತಕ್ಕೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.