2 Kings 19:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನನ್ನ ವಿರುದ್ಧ ದಂಗೆ ಎದ್ದಿರುವೆ. ನಿನ್ನ ಗರ್ವದ ನಿಂದನೆಯನ್ನು ನಾನು ಕೇಳಿರುವೆ. ಆದ್ದರಿಂದ ನಾನು ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ ನೀನು ಬಂದ ದಾರಿಯಲ್ಲಿಯೇ ಹಿಂದಿರುಗುವಂತೆ ಮಾಡುತ್ತೇನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ, ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ. ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.
Kannada BSI Bible 2016
ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನನಗೆ ವಿರೋಧವಾಗಿ ಉಬ್ಬಿಕೊಂಡಿರುವದೂ ಕುಪಿತನಾಗಿರುವದೂ ನನಗೆ ತಿಳಿದು ಬಂತು. ಆದದರಿಂದ ನಿನಗೆ ಮೂಗುದಾಣವನ್ನೂ ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿದ್ದಾನೆ.
Kannada Bible (KNCL) BSI 2016
ನನ್ನ ವಿರುದ್ಧ ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ ಎಂದೇ ಹಾಕುವೆ ದಾರ ಕಡಿವಾಣ ಮೂಗಿಗೆ, ಬಾಯಿಗೆ; ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ, ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ, ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.’