2 Kings 19:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ನಿನಗೆ ಸಹಾಯ ಮಾಡುತ್ತೇನೆಂಬುದಕ್ಕೆ ಇದು ಸಾಕ್ಷಿಯ ಗುರುತಾಗಿದೆ: ಈ ವರ್ಷ ನೀವು ತಾನಾಗಿಯೇ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಮುಂದಿನ ವರ್ಷ ನೀವು ಬೀಜದಿಂದ ಬೆಳೆಯುವ ಧಾನ್ಯವನ್ನು ತಿನ್ನುತ್ತೀರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೆಳೆಸಿದ ಧಾನ್ಯವನ್ನು ಒಟ್ಟುಗೂಡಿಸುತ್ತೀರಿ. ನೀವು ದ್ರಾಕ್ಷಿತೋಟಗಳನ್ನು ಬೆಳೆಸುತ್ತೀರಿ; ಅವುಗಳ ದ್ರಾಕ್ಷಿಯನ್ನು ತಿನ್ನುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತುಗಳು ನೆರವೇರುವವು ಎಂಬುದಕ್ಕೆ ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ, ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು, ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
Kannada BSI Bible 2016
ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತುಗಳು ನೆರವೇರುವವೆಂಬದಕ್ಕೆ ನೀವು ಈ ವರುಷದಲ್ಲಿ ಕೂಳೆ ಬೆಳೆಯನ್ನೂ ಮುಂದಿನ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮೂರನೆಯ ವರುಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ ದ್ರಾಕ್ಷೇತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವದೇ ಗುರುತಾಗಿರುವದು.
Kannada Bible (KNCL) BSI 2016
ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ ಹೀಗೆಂದನು: “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು: ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯ ಮಾಡಿ ಶೇಖರಿಸಿದ್ದನ್ನು ಅನುಭವಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹಿಜ್ಕೀಯನೇ, ಇದು ನಿಮಗೆ ಸಂಕೇತವಾಗಿರುವದು, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವಿರಿ.