2 Kings 19:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ, ಇಂದು ಮಹಾಕಷ್ಟದ ದಿನವಾಗಿದೆ. ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಇದು ಪ್ರಸವವೇದನೆಯ ದಿನದಂತಿದೆ. ಆದರೆ ಹೆರಲು ಶಕ್ತಿಯೇ ಇಲ್ಲವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹಿಜ್ಕೀಯನಿಗೆ, “ಈ ದಿನದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ. ನಾವು ಅಪಮಾನವನ್ನು, ನಿಂದೆಯನ್ನು ಅನುಭವಿಸಬೇಕಾಗಿ ಬಂದಿದೆ. ಹೆರಿಗೆಯ ಕಾಲ ಬಂದಿದೆ; ಆದರೆ ಹೆರುವುದಕ್ಕೆ ಬಲ ಸಾಲದು.
Kannada BSI Bible 2016
ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದಿವಸದಲ್ಲಿ ನಮಗೆ ಮಹಾಕಷ್ಟವು ಸಂಭವಿಸಿರುತ್ತದೆ; ನಾವು ಶಿಕ್ಷೆಯನ್ನೂ ನಿಂದೆಯನ್ನೂ ಅನುಭವಿಸಬೇಕಾಯಿತು. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು.
Kannada Bible (KNCL) BSI 2016
ಅವನಿಗೆ ಹೀಗೆಂದು ಹೇಳಿ: ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ; ಹೆರಿಗೆಯ ಕಾಲ ಬಂದಿದೆ. ಆದರೆ ಹೆರುವುದಕ್ಕೆ ಶಕ್ತಿಸಾಲದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.