2 Kings 19:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಪ್ಪಿಸಿಕೊಂಡು ಉಳಿದ ಯೆಹೂದ ಕುಲದವರು ಮತ್ತೆ ವೃದ್ಧಿಯಾಗುವರು. ಅವರು ಆಳವಾಗಿ ಬೇರೂರಿ ಫಲವನ್ನು ಫಲಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ದಿಯಾಗುವರು.
Kannada BSI Bible 2016
ಯೆಹೂದದ ಮನೆತನದಲ್ಲಿ ಉಳಿದು ತಪ್ಪಿಸಿಕೊಂಡವರು ತಿರಿಗಿ ಕೆಳಗೆ ಬೇರೂರಿ ಮೇಲಕ್ಕೆ ಫಲ ಬಿಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಪ್ಪಿಸಿಕೊಂಡು ಉಳಿದ ಯೆಹೂದ್ಯರು ದೇಶದಲ್ಲಿ ನೆಲೆಗೊಂಡು ಅಭಿವೃದ್ಧಿಯಾಗುವರು.
Kannada Bible (KNCL) BSI 2016
ಅಳಿದು ಉಳಿದ ಯೆಹೂದ್ಯರು ನಾಡಿನಲ್ಲಿ ಬೇರೂರಿ ನೆಲೆಗೊಳ್ಳುವರು; ಬೆಳೆದು ಅಭಿವೃದ್ಧಿಯಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.